ಕರ್ನಾಟಕ ಸೇರಿ ಐದು ರಾಜ್ಯಗಳಿಂದ ಬೇಳೆಕಾಳು, ಎಣ್ಣೆ ಬೀಜಗಳ ಖರೀದಿಗೆ ಕೇಂದ್ರದ ಅನುಮೋದನೆ

ತೊಗರಿ ಕಣಜ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಬೇಳೆ ಕಾಳು ಖರೀದಿ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ತೊಗರಿ ಕಣಜ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಬೇಳೆ ಕಾಳು ಖರೀದಿ ಮಾಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 

ಹಿಂಗಾರು ಹಂಗಾಮಿನಲ್ಲಿ 13.77 ಲಕ್ಷ ಮೆಟ್ರಿಕ್ ಟನ್ ಬೇಳೆಕಾಳು ಮತ್ತು ತೈಲ ಬೀಜಗಳ ಖರೀದಿಸಲು ಅನುಮತಿ ಕೊಟ್ಟಿದೆ. 

ಕರ್ನಾಟಕವಲ್ಲದೇ ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಹರಿಯಾಣ  ರಾಜ್ಯಗಳಲ್ಲಿ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಪ್ರಾರಂಭಿಸುವಂತೆ ಸೂಚಿಸಿದೆ.

ಈ ತಿಂಗಳ 24 ರವರೆಗೆ, ಕೇಂದ್ರ ಸರ್ಕಾರವು ತನ್ನ ನೋಡಲ್ ಏಜೆನ್ಸಿಗಳ ಮೂಲಕ 34 ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಸಿದ್ದು, ತಮಿಳಿನಾಡಿನಲ್ಲಿ ಹಲವು ರೈತರಿಗೆ ಅನುಕೂಲವಾಗಿದೆ. ಅದೇ ರೀತಿಯಲ್ಲಿ 52 ಕೋಟಿ ರೂಪಾಯಿ ಮೊತ್ತದ ಕನಿಷ್ಠ ಬೆಂಬಲ ಬೆಲೆಯಡಿ 5,089 ಮೆಟ್ರಿಕ್ ಟನ್ ಕೊಬ್ಬರಿಯನ್ನು ಖರೀದಿಸಿದ್ದು, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ 3961 ರೈತರು ಪ್ರಯೋಜನ ಪಡೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com