ಸಂಜಯ್ ರಾವತ್
ಸಂಜಯ್ ರಾವತ್

2019ರ 'ಸುಪ್ರೀಂ' ಅಯೋಧ್ಯೆ ತೀರ್ಪಿನ ನಂತರ ಬಾಬ್ರಿ ಪ್ರಕರಣವು ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿತು: ಶಿವಸೇನೆ

ಅಯೋಧ್ಯೆ ರಾಮಜನ್ಮಭೂಮಿ ಕುರಿತಾಗಿ 2019ರಲ್ಲಿ ಸುಪ್ರೀಂ ಕೋರ್ಟ್ ನ ಐತಿಹಾಸಿಕ ತೀರ್ಪಿನ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣವು ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿತ್ತು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. 

ಮುಂಬೈ: ಅಯೋಧ್ಯೆ ರಾಮಜನ್ಮಭೂಮಿ ಕುರಿತಾಗಿ 2019ರಲ್ಲಿ ಸುಪ್ರೀಂ ಕೋರ್ಟ್ ನ ಐತಿಹಾಸಿಕ ತೀರ್ಪಿನ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣವು ತನ್ನ ಪ್ರಸ್ತುತತೆಯನ್ನು ಕಳೆದುಕೊಂಡಿತ್ತು ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. 

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಲಖನೌ ಸಿಬಿಐ ವಿಶೇಷ ಕೋರ್ಟ್ ಎಲ್ಲಾ 32 ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಸಂಜಯ್ ರಾವತ್, ಸುಪ್ರೀಂ ಅಯೋಧ್ಯೆ ತೀರ್ಪು ಹಾಗೂ ಆಗಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಬಳಿಕ ಬಾಬ್ರಿ ಪ್ರಕರಣ ಅಪ್ರಸ್ತುತವಾಗಿತ್ತು ಎಂದರು. 

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ. ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ. ಉದ್ದೇಶಪೂರ್ವಕವಾಗಿ ಮಸೀದಿಯನ್ನು ಧ್ವಂಸ ಮಾಡಲಾಗಿದೆ ಎಂದು ಹೇಳಲು ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷಿಗಳಿಲ್ಲ ಎಂದು ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ತೀರ್ಪು ನೀಡಿದ್ದರು.

1992ರ ಡಿಸೆಂಬರ್ 6ರಂದು ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಕರಸೇವಕರ ತಂಡ ಧ್ವಂಸ ಮಾಡಿತ್ತು. 

Related Stories

No stories found.

Advertisement

X
Kannada Prabha
www.kannadaprabha.com