2020ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ಕೋವಿಡ್ -19 ಸಾಂಕ್ರಾಮಿಕ ಮತ್ತು ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ನಡೆಸುವ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಮತ್ತು ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ನಡೆಸುವ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಅಕ್ಟೋಬರ್ 4ಕ್ಕೆ ನಿಗದಿಯಾಗಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿ ಯುಪಿಎಸ್ ಸಿಯ 20 ಆಕಾಂಕ್ಷಿಗಳು ವಕೀಲರ ಮೂಲಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆ ಮುಂದೂಡಲು ನಿರಾಕರಿಸಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಅರ್ಜಿದಾರರು ನಾಗರಿಕ ಸೇವೆಗಳ ಪರೀಕ್ಷೆಯನ್ನು ಎರಡು ಅಥವಾ ಮೂರು ತಿಂಗಳು ಮುಂದೂಡಬೇಕೆಂದು ಕೋರಿದ್ದರು. ಪ್ರವಾಹ / ನಿರಂತರ ಮಳೆ ಮತ್ತು ಕೊರೋನಾ ಕಡಿಮೆಯಾದ ನಂತರ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com