ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ!
ನವದೆಹಲಿ: ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಹತ್ತು ರಾಜ್ಯಗಳಲ್ಲಿ ಕೋವಿಡ್-19 ದೈನಂದಿನ ಪ್ರಕರಣಗಳಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಈ ರಾಜ್ಯಗಳಲ್ಲಿಯೇ ಶೇ.83. 29 ರಷ್ಟು ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ದೇಶದಲ್ಲಿ ಕೊರೋನಾ ದೈನಂದಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇಂದು ಒಟ್ಟು 1,31,968 ಹೊಸ ಪ್ರಕರಣಗಳು ದಾಖಲಾಗಿವೆ. ಇದು ಇದುವರೆಗೆ ದೇಶದಲ್ಲಿ ದಾಖಲಾದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ.
ಮಹಾರಾಷ್ಟ್ರದಲ್ಲಿ ಇಂದು 56,286 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಛತ್ತೀಸ್ ಗಢದಲ್ಲಿ 10,310, ಕರ್ನಾಟಕದಲ್ಲಿ 6, 976 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,79,608ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿನ ಒಟ್ಟಾರೇ ಸೋಂಕಿತರ ಸಂಖ್ಯೆ ಶೇ. 7.50ರಷ್ಟಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಕೇರಳದಿಂದ ಒಟ್ಟಾರೇ ಶೇ. 73. 24 ರಷ್ಟು ಪ್ರಕರಣಗಳು ವರದಿಯಾಗಿದ್ದರೆ, ಮಹಾರಾಷ್ಟ್ರವೊಂದರಲ್ಲಿಯೇ ಶೇ.53. 84 ರಷ್ಟು ಪ್ರಕರಣಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ