ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ- ಮಹಾರಾಷ್ಟ್ರ ಮುಖ್ಯಮಂತ್ರಿ 

 ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
Updated on

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಒಂದೇ ಪರಿಹಾರ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಪೂರ್ಣ ಲಾಕ್ ಡೌನ್ ಬಿಟ್ಟರೆ ಬೇರೆ ಪರಿಹಾರವಿಲ್ಲ ಎಂದರು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾಳೆ ಕಾರ್ಯಪಡೆಯೊಂದಿಗೆ ಸಭೆಯೊಂದನ್ನು ನಡೆಸಲಿದ್ದಾರೆ ನಂತರ ಲಾಕ್ ಡೌನ್ ಹೇರುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವ ನವಾಬ್ ಮಲ್ಲಿಕ್  ಸರ್ವಪಕ್ಷ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಕಠಿಣ ನಿಯಮಗಳ ಹೊರತಾಗಿಯೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆರೋಗ್ಯ ವ್ಯವಸ್ಥೆಯಲ್ಲಿ ಮತ್ತಷ್ಟು ಒತ್ತಡ ಎದುರಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com