ಕೋವಿಡ್-19: ದೇಶದಲ್ಲಿಂದು ದಾಖಲೆಯ 1.45 ಲಕ್ಷ ಕೇಸ್ ಪತ್ತೆ, 794 ಮಂದಿ ಸಾವು

ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ ಮತ್ತೊಂದು ದಾಖಲೆ ಬರೆದಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,45,384 ಕೊರೋನಾ ಪ್ರಕರಣ ವರದಿಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೈನಂದಿನ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ ಮತ್ತೊಂದು ದಾಖಲೆ ಬರೆದಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,45,384 ಕೊರೋನಾ ಪ್ರಕರಣ ವರದಿಯಾಗಿದೆ. 

ಇನ್ನು ಒಂದೇ ಬರೋಬ್ಬರಿ 794 ಮಂದಿ ಬಲಿಯಾಗಿದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಕಳೆದ 31 ದಿನಗಳಿಂದ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,46,631ಕ್ಕೆ ಏರಿಕೆಯಾಗಿದೆ. 

ಒಂದೇ ದಿನ 1,45,384 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,32,05,926ಕ್ಕೆ ತಲುಪಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 77,567 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,19,90,859ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 11,73,219 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,52,14,803 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 9,80,75,160 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com