ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯ ಪರಿಸ್ಥಿತಿ ಪರಿಶೀಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದ್ದು, ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿರುವ ಸೋನಿಯಾ ಅವರು ಟೆಸ್ಟ್, ಟ್ರ್ಯಾಕ್ ಮತ್ತು ಲಸಿಕೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ್ದಾರೆಂದು ವರದಿಗಲು ತಿಳಿಸಿವೆ.
ಸಭೆಯಲ್ಲಿ ಲಸಿಕೆ ಲಭ್ಯತೆ, ಔಷಧಿ ಹಾಗೂ ವೆಂಟಿಲೇಟರ್ ಗಳ ಲಭ್ಯತೆ ಕುರಿತು ಸೋನಿಯಾ ಗಾಂಧಿಯವರು ಮಾಹಿತಿ ಪಡೆದಿದ್ದಾರೆಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.
Advertisement