
ಬಲ್ಲಿಯಾ: ಉತ್ತರ ಪ್ರದೇಶ ಸಚಿವ ಆನಂದ್ ಸ್ವರೂಪ್ ಶುಕ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಉತ್ತರ ಪ್ರದೇಶದ ಕಾನೂನು ಮತ್ತು ಸಂಸದೀಯ ಇಲಾಖೆಯ ಸಚಿವರಾಗಿರುವ ಅನಂದ್ ಸ್ವರೂಪ್ ಶುಕ್ಲಾ ಅವರಿಗೆ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
ಶುಕ್ರವಾರ ಪರೀಕ್ಷಾ ವರದಿ ಬಂದಿದ್ದು ಕೊರೋನಾ ಪಾಸಿಟಿವ್ ಕಂಡು ಬಂದಿದೆ.
ಇನ್ನೂ ಆನಂದ್ ಸ್ವರೂಪ್ ಶುಕ್ಲಾ ಐಸೋಲೇಟೆಡ್ ಆಗಿದ್ದು, ಕೆಲ ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
Advertisement