ಅಕ್ರಮ ಸಂಬಂಧ ಶಂಕೆ: ನಡುರಸ್ತೆಯಲ್ಲಿ ಪತ್ನಿಗೆ 25 ಬಾರಿ ಇರಿದು ಕೊಂದ ಪತಿ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ನವದೆಹಲಿ: ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಪತಿ ನಡುರಸ್ತೆಯಲ್ಲೇ ಪತ್ನಿಗೆ 25ಕ್ಕೂ ಹೆಚ್ಚು ಬಾರಿ ಇರಿದು ಕೊಂದಿರುವ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೆಹಲಿಯ ಮಾರುಕಟ್ಟೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿ ಹರೀಶ್ ಮೆಹ್ತಾ ತನ್ನ ಪತ್ನಿ 26 ವರ್ಷದ ನೀಲುಳನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ನೀಲು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು.

ಹರೀಶ್ ಮೆಹ್ತಾ ಪತ್ನಿಗೆ ಇರಿಯುತ್ತಿದ್ದ ವೇಳೆ ಸಾರ್ವಜನಿಕರು ಆಕೆಯನ್ನು ರಕ್ಷಿಸಲು ಮುಂದಾದರು. ಆದರೆ ಈ ವೇಳೆ ಹರೀಶ್ ಮುಂದೆ ಬಂದರ ಮೇಲೆ ಚಾಕು ತೋರಿಸಿ ಹೆದರಿಸಿದ್ದಾನೆ. ಇದರಿಂದ ಅಸಹಾಯಕರಾದ ಸಾರ್ವಜನಿಕರು ಭೀಕರ ದೃಶ್ಯವನ್ನು ನೋಡುತ್ತಾ ನಿಂತಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹರೀಶ್ ಮೆಹ್ತಾನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


