ಶರದ್ ಪವಾರ್ ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ: ಆರೋಗ್ಯ ಸ್ಥಿರ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಶರದ್ ಪವಾರ್
ಶರದ್ ಪವಾರ್
Updated on

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಶಸ್ತ್ರ ಚಿಕಿತ್ಸೆ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತಿಳಿಸಿದರು. 

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಶರದ್‌ ಪವಾರ್‌ ಅವರನ್ನು ಭಾನುವಾರ ದಾಖಲಿಸಲಾಗಿತ್ತು. ಗ್ಯಾಲ್ ಬ್ಲಾಡರ್ ಸರ್ಜರಿ ನಡೆದಿದೆ. ಡಾ. ಬಲ್ಸಾರ್‌ ಅವರು ಯಶ್ವಸಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಪವಾರ್‌ ಅವರ ಆರೋಗ್ಯದ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮಲಿಕ್‌ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com