ವಿವಾದಾತ್ಮಕ ಹೇಳಿಕೆ: ಬಿಜೆಪಿ ನಾಯಕ ರಾಹುಲ್ ಸಿನ್ಹಾ ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗ

ಕೂಚ್‌ಬಿಹಾರ ಜಿಲ್ಲೆಯ ಸೀತಾಲ್‌ಕುಚಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ರಾಹುಲ್‌ ಸಿನ್ಹಾ ಅವರಿಗೆ ಚುನಾವಣಾ ಆಯೋಗ 48 ಗಂಟೆ ಪ್ರಚಾರ ಸಭೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಿದೆ.
ಬಿಜೆಪಿ ನಾಯಕ ರಾಹುಲ್ ಸಿನ್ಹಾ
ಬಿಜೆಪಿ ನಾಯಕ ರಾಹುಲ್ ಸಿನ್ಹಾ
Updated on: 

ಕೋಲ್ಕತ್ತ: ಕೂಚ್‌ಬಿಹಾರ ಜಿಲ್ಲೆಯ ಸೀತಾಲ್‌ಕುಚಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ರಾಹುಲ್‌ ಸಿನ್ಹಾ ಅವರಿಗೆ ಚುನಾವಣಾ ಆಯೋಗ 48 ಗಂಟೆ ಪ್ರಚಾರ ಸಭೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಿದೆ.

ಬಂಗಾಳ ವಿಧಾನಸಭೆಗೆ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಸೀತಾಲ್‌ಕುಚಿಯಲ್ಲಿ ಗಲಭೆ ನಡೆದಿತ್ತು. ಈ ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ನಡೆಸಿದ ದಾಳಿಯಲ್ಲಿ ಐದು ಮಂದಿ ಮೃತಪಟ್ಟಿದ್ದರು. ಈ ವೇಳೆ ಹಬ್ರಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ  ಸಿನ್ಹಾ, ಕ್ಷೇತ್ರದಲ್ಲಿ ನಡೆದ ಪ್ರಚಾರ ರ‍್ಯಾಲಿಯಲ್ಲಿ ಸೀತಾಲ್‌ಕುಚಿ ಗಲಭೆ ವಿಚಾರ ಪ್ರಸ್ತಾಪಿಸಿದ್ದರು. ಈ ವೇಳೆ ಅವರು ನಾಲ್ಕು ಮಂದಿಯಲ್ಲ, ಕೇಂದ್ರ ಪಡೆಗಳು ಕೂಚ್‌ಬಿಹಾರದ ಸೀತಾಲ್‌ಕುಚಿಯಲ್ಲಿ ಎಂಟು ಜನರಿಗೆ ಗುಂಡು ಹಾರಿಸಬೇಕಿತ್ತು ಎಂದಿದ್ದರು. ಹೀಗಾಗಿ ಅವರ ವಿರುದ್ಧ ಚುನಾವಣಾ ಆಯೋಗ ಈ ಕ್ರಮ  ಕೈಗೊಂಡಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಇದೇ ರೀತಿ ನಿಷೇಧ ಹೇರಲಾಗಿದ್ದು. ʼಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಭದ್ರತಾಪಡೆಗಳ ವಿರುದ್ಧ ಮಮತಾ ಅವರು ನೀಡಿರುವ ಹೇಳಿಕೆಗಳು ರಾಜ್ಯಾದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಹೀಗಾಗಿ ಅವರ ಪ್ರಚಾರದ ಮೇಲೆ  ಏಪ್ರಿಲ್ 12ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯ ವರೆಗೆ 24 ಗಂಟೆಗಳ ನಿಷೇಧ ವಿಧಿಸಲಾಗಿದೆʼ ಎಂದು ಚುನಾವಣಾ ಆಯೋಗ ಸೋಮವಾರ ರಾತ್ರಿ ತಿಳಿಸಿದೆ.‌

ಸಿನ್ಹಾ ಮಾತ್ರವಲ್ಲದೆ ಗಲಭೆ ಸಂಬಂಧ ಇಂತಹುದೇ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ನಾಯಕರಾದ ದಿಲೀಪ್‌ ಘೋಷ್‌ ಮತ್ತು ಸಯಂತನ್‌ ಬಸು ಅವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ)‌ ನಾಯಕರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಕ್ರಮಕ್ಕೆ  ಮುಂದಾಗಿರುವ ಆಯೋಗ ಹೇಳಿಕೆ ನೀಡಿರುವ ಎಲ್ಲ ನಾಯಕರಿಗೂ ಸ್ಪಷ್ಟನೆ ಕೇಳಿದೆ.

ಸೀತಾಲಕುಚಿಯಲ್ಲಿನ ತಂಟೆ ಹುಡುಗರು ಗುಂಡೇಟು ತಿಂದಿದ್ದಾರೆ. ಮುಂದಿನ ಹಂತದ ಮತದಾನದಲ್ಲಿ ತುಂಟತನ ತೋರಿದರೆ ಮತ್ತಷ್ಟು ಗುಂಡೇಟು ತಿನ್ನಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com