ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ 

 ಕೋವಿಡ್-19 ಪಾಸಿಟಿವ್ ಕಾರಣದಿಂದ ಕೋಝಿಕೋಡ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ. 

ತಿರುವನಂತಪುರಂ: ಕೋವಿಡ್-19 ಪಾಸಿಟಿವ್ ಕಾರಣದಿಂದ ಕೋಝಿಕೋಡ್ ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬುಧವಾರ ಡಿಸ್ಚಾರ್ಜ್ ಆಗಿದ್ದಾರೆ. 

ಕೋವಿಡ್ ಪಾಸಿಟಿವ್ ವರದಿಯಿಂದಾಗಿ ಏಪ್ರಿಲ್ 8 ರಂದು ಮುಖ್ಯಮಂತ್ರಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವೈದ್ಯಕೀಯ ಬುಲೆಟಿನ್ ನಲ್ಲಿ ಹೇಳಲಾಗಿದೆ. ಅವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ, ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ದೃಢಪಟ್ಟಿರುವುದಾಗಿ ಅದರಲ್ಲಿ ಹೇಳಲಾಗಿದೆ. 

ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಫೇಸ್ ಬುಕ್ ನಲ್ಲಿ ಫೋಸ್ಟ್ ವೊಂದನ್ನು ಹಾಕಿರುವ ವಿಜಯನ್, ಕೋಝಿಕೋಡ್  ವೈದ್ಯಕೀಯ ಕಾಲೇಜಿನ ವೈದ್ಯರು ಹಾಗೂ ಸಿಬ್ಬಂದಿ ಅತ್ಯುತ್ತಮವಾಗಿ ಆರೈಕೆ ಮಾಡಿದರು. ರಾಜ್ಯದ ಜನರು ತುಂಬಾ ಬೆಂಬಲ ನೀಡಿದ್ದು, ಪ್ರತಿಯೊಬ್ಬರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ. 

ಏಪ್ರಿಲ್ 6 ರಂದು ನಡೆದ ಚುನಾವಣೆಗಾಗಿ ಕಣ್ಣೂರಿನ ಧರ್ಮದಾಮ್ ಕ್ಷೇತ್ರದಿಂದ ಸಿಪಿಐ(ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯನ್ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ನಡೆಸಿದ್ದರು. ಪ್ರಚಾರದ ಕೊನೆಯ ದಿನ ಧರ್ಮದಾಮ್ ನಲ್ಲಿ ನಡೆದ ರೋಡ್ ಶೋನಲ್ಲಿಯೂ ವಿಜಯನ್ ಪಾಲ್ಗೊಂಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com