ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್'ಗೆ ಕೊರೋನಾ ಪಾಸಿಟಿವ್

ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಸಿಎಂ ಯೋಗಿ ಅದಿತ್ಯನಾಥ್
ಸಿಎಂ ಯೋಗಿ ಅದಿತ್ಯನಾಥ್
Updated on: 

ಲಖನೌ: ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಕುರಿತು ಯೋಗಿ ಆದಿತ್ಯನಾಥ್ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಆರಂಭಿಕ ಲಕ್ಷಣಗಳು ಕಂಡು ಬಂದ ಕೂಡಲೇ ಕೊರೋನಾ ಪರೀಕ್ಷೆಗೊಳಪಡಲಾಗಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಇದೀಗ ನಾನು ಸೆಲ್ಫ್ ಐಸೋಲೇಷನ್ ನಲ್ಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ನನ್ನ ಕೆಲಸವನ್ನು ಮುಂದುವರೆಸುತ್ತೇನೆಂದು ತಿಳಿಸಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿಗಳ ಕಚೇರಿಯ ಹಲವು ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿತ್ತು. ಬಳಿಕ ಯೋಗಿ ಆದಿತ್ಯನಾಥ್ ಅವರು ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದರು. ಇದೀಗ ಯೋಗಿ ಆದಿತ್ಯನಾಥ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com