ಸಿಬಿಐ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ವಿಧಿವಶ

ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ (68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. 
ರಂಜಿತ್‌ ಸಿನ್ಹಾ
ರಂಜಿತ್‌ ಸಿನ್ಹಾ
Updated on

ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ (68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. 

ಕೋವಿಡ್‌–19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ರಂಜಿತ್ ಸಿನ್ಹಾ ಅವರಿಗೆ ಕೊರೋನಾ ವೈರಸ್‌ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.

1974ನೇ ಬ್ಯಾಚ್‌ ಬಿಹಾರ ಕೇಡರ್‌ನ ಐಪಿಎಸ್‌ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಸಿನ್ಹಾ ನಿಧನರಾದರು.

2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com