ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಒಕ್ಕರಿಸಿದ ಕೋವಿಡ್-19 ಸೋಂಕು

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು
Updated on: 

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.

ಈ ಬಗ್ಗೆ ಸ್ವತಃ ಕಿರಣ್ ರಿಜಿಜು ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, 'ಹಲವು ಬಾರಿ ಪರೀಕ್ಷೆಗೆ ಒಳಗಾದ ಬಳಿಕ ನನ್ನ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ಈ ಕುರಿತು ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ನಿಗಾ ವಹಿಸಿ, ಸ್ವಯಂ ಕ್ವಾರಂಟೈನ್ ಆಗಿ ಮತ್ತು  ಪರೀಕ್ಷೆ ಮಾಡಿಸಿಕೊಳ್ಳಿ. ನಾನು ಚೆನ್ನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಉತ್ತರಾಖಂಡದ ತೆಹ್ರಿಯಲ್ಲಿ ಜಲ ಮತ್ತು ಸಾಹಸ ಕ್ರೀಡಾ ಸಂಸ್ಥೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಸೋಂಕಿನಿಂದ ಚೇತರಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ ಸಿಂಗ್ ರಾವತ್ ಸಹ ರಿಜಿಜು ಜತೆ  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com