ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ದೇಶ
ಮಾಜಿ ಪ್ರಧಾನಿ ಡಾ. ಸಿಂಗ್ ಗೆ ಕೊರೋನಾ ಸೋಂಕು; ಏಮ್ಸ್ ಗೆ ದಾಖಲು
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಏ.19 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಡಾ. ಸಿಂಗ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿದ್ದ ಮಾಜಿ ಪ್ರಧಾನಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದರು.
ಕೋವಿಡ್-19 ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು ಜನಸಂಖ್ಯೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಅವರು ಸಲಹೆ ನೀಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ