ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.

ಹೌದು.. ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ  ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವದರಿಂದ ರಾಜ್ಯ ಸರ್ಕಾರ ಈ ಆರು ರಾಜ್ಯಗಳನ್ನು 'ಸೂಕ್ಷ್ಮ ವಲಯಗಳು' ಎಂದು ವರ್ಗೀಕರಿಸಿದೆ. ಕೊರೋನವೈರಸ್ ಹರಡುವುದನ್ನು ನಿಯಂತ್ರಿಸಲು ಈ ರಾಜ್ಯಗಳಿಂದ ರೈಲ್ವೆ ಪ್ರಯಾಣಿ ಮಾಡುವವರಿಗೆ ಹೊಸ ಎಸ್‌ಒಪಿ ಜರಿ ಮಾಡಲಾಗಿದೆ.

ಅಂತೆಯೇ ಮಹಾರಾಷ್ಟ್ರಕ್ಕೆ ಬರುವ 48 ಗಂಟೆಗಳ ಮೊದಲು ಮಾಡಿಸಲಾದ ಕೋವಿಡ್-19 ನೆಗೆಟಿವ್ ರಿಪೋರ್ಟ್ ಅಥವಾ ಆರ್‌ಟಿ-ಪಿಸಿಆರ್ ಟೆಸ್ಟ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರು, 'ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್-19 ನೆಗೆಟಿವ್ ರಿಪೋರ್ಟ್ ಅಥವಾ ಆರ್‌ಟಿ-ಪಿಸಿಆರ್ ಟೆಸ್ಟ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಮತ್ತು ಯಾವುದೇ ರೋಗ  ಲಕ್ಷಣವಿಲ್ಲದ ಪ್ರಯಾಣಿಕರು ಮಾತ್ರ ಮಹಾರಾಷ್ಟ್ರಕ್ಕೆ ರೈಲುಗಳನ್ನು ಹತ್ತಲು ಅವಕಾಶವಿರುತ್ತದೆ. ಬೋರ್ಡಿಂಗ್ / ಡಿಬೋರ್ಡಿಂಗ್ ಮತ್ತು ಪ್ರಯಾಣದ ಸಮಯದಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಿರಬೇಕು' ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಈ ಆರು ರಾಜ್ಯಗಳಿಂದ ಚಲಿಸುವ ರೈಲುಗಳಲ್ಲಿ ಮಹಾರಾಷ್ಟ್ರಕ್ಕೆ ಯಾವುದೇ ಕಾಯ್ದಿರಿಸಲಾಗದ ಟಿಕೆಟ್ ನೀಡಬಾರದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com