ಕೋವಿಡ್‌-19 ಸೋಂಕು ಏರಿಕೆ: ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು, ನಿಗದಿಯಂತೆ 12ನೇ ತರಗತಿ ಪರೀಕ್ಷೆ ಆಯೋಜನೆ

ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐಸಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ದೇಶದಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐಸಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಿಐಎಸ್‌ಸಿಇ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಐಸಿಎಸ್‌ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅಂತೆಯೇ 12ನೇ ತರಗತಿ ಪರೀಕ್ಷೆಗಳು ಈ ಹಿಂದೆ ನಿಗದಿ ಮಾಡಿದಂತೆ ನಡೆಯಲಿದೆ ಎಂದು ಹೇಳಲಾಗಿದೆ.

ಈ ಹಿಂದಿನ ಆದೇಶದಂತೆ ಪರಿಷ್ಕೃತ ವೇಳಾಪಟ್ಟಿಯ ಬಗ್ಗೆ ಜೂನ್ 1ರಂದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸಿಐಎಸ್‌ಸಿಇ ಹೇಳಿದೆ.

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಸಹ ಈಗಾಗಲೇ ಹತ್ತನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com