ಉತ್ತರ ಪ್ರದೇಶದಾದ್ಯಂತ ವಾರಾಂತ್ಯ ಲಾಕ್ ಡೌನ್ ಜಾರಿ

ಉತ್ತರ ಪ್ರದೇಶದಲ್ಲೂ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಡೀ ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ವಾರಾಂತ್ಯ ಲಾಕ್ ಡೌನ್ ವಿಧಿಸಲು...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಉತ್ತರ ಪ್ರದೇಶದಲ್ಲೂ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಡೀ ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ವಾರಾಂತ್ಯ ಲಾಕ್ ಡೌನ್ ವಿಧಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮಂಗಳವಾರ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರಾಂತ್ಯ ಸುಮಾರು 60 ಗಂಟೆಗಳ ಕಾಲ ಲಾಕ್ ಡೌನ್ ಗೆ ಆದೇಶ ನೀಡುವುದರ ಜೊತೆಗೆ, 500 ಅಥವಾ ಹೆಚ್ಚಿನ ಸಕ್ರಿಯ ಪ್ರಕರಣಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಅಗತ್ಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ರಾಜ್ಯಾದ್ಯಂತ ವಾರದ ದಿನಗಳಲ್ಲೂ ರಾತ್ರಿಯ ಕರ್ಫ್ಯೂ ಮುಂದುವರಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಇರುತ್ತದೆ ಮತ್ತು ರಾಜ್ಯಾದ್ಯಂತ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಕರೋನಾ ಕರ್ಫ್ಯೂ ಜಾರಿಗೊಳಿಸಲಾಗುವುದು" ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಅವನಿಶ್ ಕುಮಾರ್ ಅವಸ್ಥಿ ಪಿಟಿಐಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com