ಚಂಡೀಗಢ: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ಮೂವರು ಪಾಕಿಸ್ತಾನಿ ನುಸುಳುಕೋರರು ಭಾರತದ ಗಡಿಯೊಳಗೆ ಪ್ರವೇಶಿಸುವುದನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದೆ.
ಪಾಕಿಸ್ತಾನ-ಭಾರತದ ನಡುವೆ ಇರುವ ಅಂತಾರಾಷ್ಟ್ರೀಯ ಗಡಿಯಿಂದ ಪ್ರವೇಶಿಸಲು ಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಮೂವರ ಅನುಮಾನಾಸ್ಪದ ನಡೆ ಗಮನಿಸಿದ ಗಡಿ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಏ.21 ರಂದು ರಾತ್ರಿ 10:15 ಕ್ಕೆ ಈ ಘಟನೆ ನಡೆದಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement