
ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವಂತೆಯೇ, ಏಪ್ರಿಲ್ 25 ರಿಂದ ಮೇ 3 ರವರೆಗೆ ಭಾರತದಿಂದ ವಿಮಾನಗಳ ಹಾರಾಟವನ್ನು ರದ್ದುಪಡಿಸುವುದಾಗಿ ಯುಎಇ ಗುರುವಾರ ಪ್ರಕಟಿಸಿದೆ.
ಭಾರತದಿಂದ ಪ್ರಯಾಣಿಕರು ಬೇರೆ ರಾಷ್ಟ್ರಗಳ ಮೂಲಕ ಯುಎಇ ಪ್ರವೇಶಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರು ಇತರೆ ರಾಷ್ಟ್ರಗಳಲ್ಲಿ 14 ದಿನಗಳ ವಾಸ್ತವ್ಯ ಹೂಡಿದ್ದರೆ, ತದನಂತರದಲ್ಲಿ ಯುಎಇ ಪ್ರವೇಶಕ್ಕೆ ಅವಕಾಶ ಸಿಗಲಿದೆ.
ಉಭಯ ರಾಷ್ಟ್ರಗಳ ನಡುವೆ ಕಾರ್ಗೊ ವಿಮಾನಗಳು ಹಾಗೂ ಯುಎಇನಿಂದ ಭಾರತಕ್ಕೆ ಬಂದಿಳಿಯುವ ವಿಮಾನಗಳ ಮೇಲೆ ಯಾವುದೇ ನಿರ್ಬಂಧ ಇರುವುದಿಲ್ಲ.
Advertisement