ಕೊರೋನಾ ಸ್ಫೋಟ: ದೇಶದಲ್ಲಿಂದು 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 2,104 ಮಂದಿ ಸಾವು

ಭಾರತದಲ್ಲಿ ಕೊರೋನಾ ಸ್ಫೋಟ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಕೊರೋನಾ ಸ್ಫೋಟ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,104 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,84,657ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,91,428 ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,78,841 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,34,54,880ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 16,51,711 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,27,05,103 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,23,30,644ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com