ಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ವೈರಸ್ ರೋಗಿಗಳು ವೈದ್ಯಕೀಯ ಆಮ್ಲಜನಕದ ದಾಸ್ತಾನು ಮುಗಿದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗ್ಯಾಲಕ್ಸಿ ಆಸ್ಪತ್ರೆಯಲ್ಲಿ ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ(ಕೊಟ್ವಾಲಿ ಪ್ರದೇಶ) ದೀಪಕ್ ಮಿಶ್ರಾ ಅವರು ಹೇಳಿದ್ದಾರೆ.
"ಆಸ್ಪತ್ರೆಯ ಐಸಿಯುನಲ್ಲಿದ್ದ ಐವರು ಕೊರೋನಾ ರೋಗಿಗಳು ಆಕ್ಸಿಜನ್ ಪೂರೈಕೆ ಇಲ್ಲದೆ ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬ ಸದಸ್ಯರು ಹೇಳಿರುವುದಾಗಿ" ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಆಸ್ಪತ್ರೆಗೆ ಹೊರಗೆ ಮೃತರ ಕುಟುಂಬ ಸದಸ್ಯರ ಆಸ್ಪತ್ರೆ ಸಿಬ್ಬಂದಿ ಜತೆ ವಾಗ್ವಾದ ನಡೆಸುತ್ತಿರುವ ಸಂದೇಶ ಬಂತು. ಕೂಡಲೇ ಸ್ಥಳಕ್ಕೆ ತೆರಳಿದಾಗ, ಆಕ್ಸಿಜನ್ ಇಲ್ಲದೆ ತಮ್ಮ ಪ್ರೀತಿಪಾತ್ರರು ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ ಮಿಶ್ರಾ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಆಸ್ಪತ್ರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ