ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 
ಮಹಾರಾಷ್ಟ್ರ ಆಸ್ಪತ್ರೆ
ಮಹಾರಾಷ್ಟ್ರ ಆಸ್ಪತ್ರೆ

ಮುಂಬೈ: ಮಹಾರಾಷ್ಟ್ರದ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 

ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿತ್ತು. ದುರ್ಘಟನೆ ಸಂಭವಿಸಿದ ಸಂದರ್ಭದಲ್ಲಿ 13 ಮಂದಿ ಸಜೀವ ದಹನವಾಗಿದ್ದರು. 

ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಹಾಗೂ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರೆ ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇದು ಎರಡೇ ದಿನಗಳಲ್ಲಿ ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ 2ನೇ ದುರಂತವಗಿದ್ದು. ಬುಧವಾರ ನಾಸಿಕ್ ​ನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು.

ಇದು ಎರಡೇ ದಿನಗಳಲ್ಲಿ ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ 2ನೇ ದುರಂತವಗಿದ್ದು. ಬುಧವಾರ ನಾಸಿಕ್ ​ನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು.

ಮಹಾರಾಷ್ಟ್ರದಲ್ಲಿ ಕೋವಿಡ್ ರೂಪಾಂತರಿ ಅಲೆ ನಿತ್ಯ ಹೆಚ್ಚಳವಾಗುತ್ತಿದ್ದು, ನಿತ್ಯ ಸಾವು ನೋವಗಳು ಜಾಸ್ತಿಆಗುತ್ತಿವೆ. ಕೋವಿಡ್ ಆಸ್ಪತ್ರೆಗಳು ಕೋವಿಡ್ ಸೊಂಕಿತರಿಂದ ತುಂಬಿಹೋಗಿದ್ದು, ಬೆಡ್ ಇಲ್ಲದಂತಾಗಿದೆ ಎಂಬ ವರದಿ ಒಂದೆಡೆಯಾಗುತ್ತಿದ್ದರೇ, ಈ ನಡುವೆ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮತ್ತಷ್ಟು ಆಘಾತ ಹೆಚ್ಚಿಸಿದೆ.

ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 3.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಐಸಿಯುನಲ್ಲಿದ್ದ ಏರ್​ ಕಂಡೀಷನರ್​ ನಲ್ಲಿ ಶಾರ್ಟ್​ ಸರ್ಕ್ಯೂಟ್ ಉಂಟಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com