ಕೋವಿಡ್ -19: ಕೇಂದ್ರ ಸಚಿವ ಸೋಮ್ ಪ್ರಕಾಶ್ ಮೊಹಾಲಿ ಆಸ್ಪತ್ರೆಯ ಐಸಿಯುಗೆ ದಾಖಲು

ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರಿಗೆ ಈ ವಾರದ ಆರಂಭದಲ್ಲಿ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆಮ್ಲಜನಕದ...
ಸೋಮ್ ಪ್ರಕಾಶ್
ಸೋಮ್ ಪ್ರಕಾಶ್
Updated on: 

ಚಂಡೀಗಢ: ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರಿಗೆ ಈ ವಾರದ ಆರಂಭದಲ್ಲಿ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಮೊಹಾಲಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆಮ್ಲಜನಕದ ಬೆಂಬಲದಲ್ಲಿದ್ದು,  ವೈದ್ಯರು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಹಾಗೂ ಹೋಶಿಯಾರ್‌ಪುರ ಬಿಜೆಪಿ ಸಂಸದ ಪ್ರಕಾಶ್(72) ಈ ವಾರದ ಆರಂಭದಲ್ಲಿ ತಮಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದರು.

ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಯು ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಸೋಮ್ ಪ್ರಕಾಶ್ ಶ್ವಾಸಕೋಶದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ.  ಅವರು ಆಮ್ಲಜನಕದ ಬೆಂಬಲದಲ್ಲಿದ್ದಾರೆ. ಕೇಂದ್ರ ಸಚಿವರು ತೀವ್ರ ನಿಗಾ ಘಟಕದಲ್ಲಿದ್ದು, ಅವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ.

ಪ್ರಕಾಶ್ ಅವರು ಈ ಹಿಂದೆ ಪಟಿಯಾಲಾದ ಬನೂರ್‌ನಲ್ಲಿರುವ ಜಿಯಾನ್ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ಕರೆತರಲಾಯಿತು ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com