ಉಮರ್ ಖಾಲಿದ್ ಗೆ ಕೊರೋನಾ ಪಾಸಿಟಿವ್, ತಿಹಾರ್ ಜೈಲಿನಲ್ಲಿಯೇ ಕ್ವಾರಂಟೈನ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು...
ಉಮರ್ ಖಾಲಿದ್
ಉಮರ್ ಖಾಲಿದ್
Updated on

ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ತಿಹಾರ್ ಜೈಲು ಆವರಣದಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

33 ವರ್ಷದ ಖಾಲಿದ್ ಅವರಿಗೆ ಕೊರೋನಾ ರೋಗ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೆಹಲಿ ಗಲಭೆಯಲ್ಲಿ ಉಮರ್ ಖಾಲಿದ್ ಪಾತ್ರ ಇದೆ ಎಂಬ ಆರೋಪದ ಮೇಲೆ ಕಳೆದ ವರ್ಷ ಫೆಬ್ರವರಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com