ಚುನಾವಣೆ ಎಫೆಕ್ಟ್: ಪಶ್ಚಿಮ ಬಂಗಾಳದಲ್ಲಿ ಕೊರೋನಾಗೆ 68 ಬಲಿ, 15,992  ಮಂದಿಗೆ ಪಾಸಿಟಿವ್

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಮಹಾಮಾರಿ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಸೋಮವಾರ ಬರೋಬ್ಬರಿ 15,992 ಮಂದಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕೋಲ್ಕತಾ: ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಮಹಾಮಾರಿ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಸೋಮವಾರ ಬರೋಬ್ಬರಿ 15,992 ಮಂದಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,59,942ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 68 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 11,009 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಂದು ಕೋಲ್ಕತ್ತಾದಲ್ಲಿಯೇ 26 ಸಾವುಗಳು ಮತ್ತು 3,868 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಬುಲೆಟಿನ್ ತಿಳಿಸಿದೆ.

ಇಂದು 9,775 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 94,949ಕ್ಕೆ  ಏರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com