ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಕೊರೋನಾ ಅತಿ ವೇಗವಾಗಿ ಹರಡುತ್ತಿದೆ!

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಭಾರತದಲ್ಲಿಯೇ ಅತಿ ಹೆಚ್ಚು ವೇಗವಾಗಿ ಮಹಾಮಾರಿ ಕೊರೋನಾ ವೈರಸ್ ಹರಡುತ್ತಿದೆ.
ಮತದಾನ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಗಳು
ಮತದಾನ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿಗಳು

ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಭಾರತದಲ್ಲಿಯೇ ಅತಿ ಹೆಚ್ಚು ವೇಗವಾಗಿ ಮಹಾಮಾರಿ ಕೊರೋನಾ ವೈರಸ್ ಹರಡುತ್ತಿದೆ.

ಕರ್ನಾಟಕ ಶೇ. 9 ರಷ್ಟು ಕೊರೋನಾ  ಸ್ಫೋಟಕ ಬೆಳವಣಿಗೆ ದರ ಹೊಂದಿದ್ದು, ನಂತರದ ಸ್ಥಾನದಲ್ಲಿ ಪಶ್ಚಿಮ ಬಂಗಾಳ ಇದೆ. ಭಾರಿ ವೈದ್ಯಕೀಯ ಆಮ್ಲಜನಕದ ಬಿಕ್ಕಟ್ಟಿನಲ್ಲಿ ಸಿಲುಕಿರುವ ದೆಹಲಿ ಹಾಗೂ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿವೆ.

ಪಶ್ಚಿಮ ಬಂಗಾಳದ ಪ್ರಸ್ತುತ ಕೋವಿಡ್ ಪರಿಸ್ಥಿತಿಯ  ಅಂಕಿಅಂಶಗಳನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ರಾಜ್ಯದಲ್ಲಿ ಭಾರಿ ರ್ಯಾಲಿಗಳನ್ನು ನಡೆಸಿದ್ದಕ್ಕಾಗಿ ಭಾರಿ ಟೀಕೆಗೆ ಗುರಿಯಾಗಿದೆ. ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತದಲ್ಲಿಯೇ ಸುಮಾರು ಶೇ. 50 ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ.

ಭಾರತದಲ್ಲಿ ಈಗ ಜಾಗತಿಕವಾಗಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಏಪ್ರಿಲ್ 20 ರಿಂದ ನಿತ್ಯ 1,500 ಅಥವಾ ಅದಕ್ಕಿಂತ ಜನ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಭಾನುವಾರ ದೇಶದಲ್ಲಿ ದಾಖಲೆಯ 2,812 ಸಾವುಗಳು ವರದಿಯಾಗಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com