ಪಂಜಾಬ್: ಮದುವೆ ಆರತಕ್ಷತೆಯಲ್ಲಿ 100ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಕ್ಕೆ ವರನ ಬಂಧನ

ವಾರಾಂತ್ಯ ಲಾಕ್‌ಡೌನ್ ಸಮಯದಲ್ಲಿ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘಿಸಿ ಮದುವೆ ಆರತಕ್ಷತೆ ಮಾಡಿಕೊಳ್ಳುತ್ತಿದ್ದ ವರನನ್ನು ಬಂಧಿಸಿದ ಘಟನೆ ಶನಿವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಜಲಂಧರ್‌: ವಾರಾಂತ್ಯ ಲಾಕ್‌ಡೌನ್ ಸಮಯದಲ್ಲಿ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘಿಸಿ ಮದುವೆ ಆರತಕ್ಷತೆ ಮಾಡಿಕೊಳ್ಳುತ್ತಿದ್ದ ವರನನ್ನು ಬಂಧಿಸಿದ ಘಟನೆ ಶನಿವಾರ ರಾತ್ರಿ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದೆ.

ಜಲಂಧರ್‌ನ ದೇವಾಲಯವೊಂದರಲ್ಲಿ ನಡೆದ ಆರತಕ್ಷತೆ ಸಮಾರಂಭದಲ್ಲಿ 100 ಕ್ಕೂ ಹೆಚ್ಚು ಜನ ಭಾಗವಹಿಸಿದ್ದನ್ನು ಗಮನಿಸಿದ ಜಲಂಧರ್ ಪೊಲೀಸರು ವರ ಮತ್ತು ಆತನ ತಂದೆಯನ್ನು ಬಂಧಿಸಿದ್ದಾರೆ.

ಪೊಲೀಸರು ದಿಢೀರ್ ಆರತಕ್ಷತೆ ಸ್ಥಳಕ್ಕೆ ಆಗಮಿಸಿ ವರ ಮತ್ತು ಆತನ ತಂದೆಯನ್ನು ವಶಕ್ಕೆ ಪಡೆಯುತ್ತಿದ್ದಂತೆ, ಹಲವಾರು ಅತಿಥಿಗಳು ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ವೇಳೆ ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ 20ಕ್ಕೂ ಹೆಚ್ಚು ಜನ ಭಾಗವಹಿಸುವಂತಿಲ್ಲ. ಆದರೆ ಕೋವಿಡ್ ನಿಯಮ ಉಲ್ಲಂಘಿಸಿ ಆರತಕ್ಷತೆ ನಡೆಸಿದ್ದರಿಂದ ವರ ಹಾಗೂ ಆತನ ತಂದೆಯನ್ನು ಬಂಧಿಸಲಾಗಿದೆ ಎಂದು ಜಲಂಧರ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಆರತಕ್ಷತೆಗೆ ಜಿಲ್ಲಾಡಳಿತದಿಂದ ಯಾವುದೇ ಅನುಮತಿ ಸಹ ಪಡೆದಿಲ್ಲ ಎಂದು ಅವರು ಹೇಳಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿ ಆರತಕ್ಷತೆ ನಡೆಸಿದ್ದಕ್ಕಾಗಿ ವರ ಮತ್ತು ಅವರ ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಸಮಾರಂಭದಲ್ಲಿ ಅಷ್ಟೊಂದು ಜನ ಸೇರಿದ್ದು ತಮ್ಮ ಗಮನಕ್ಕೆ ಬಂದಿಲ್ಲಎಂದು ವರ ಪೊಲೀಸರಿಗೆ ತಿಳಿಸಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com