ಕೊರೋನಾ ಉಲ್ಬಣ: ಮತ ಎಣಿಕೆ ನಂತರ ವಿಜಯೋತ್ಸವ ನಡೆಸುವಂತಿಲ್ಲ; ಚುನಾವಣಾ ಆಯೋಗ ಖಡಕ್ ಆದೇಶ!

ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ ನಂತರ ಎಲ್ಲಾ ಬಗೆಯ ವಿಜಯೋತ್ಸವಗಳನ್ನು ನಿಷೇಧಿಸಿ ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ ನಂತರ ಎಲ್ಲಾ ಬಗೆಯ ವಿಜಯೋತ್ಸವಗಳನ್ನು ನಿಷೇಧಿಸಿ ಚುನಾವಣಾ ಆಯೋಗ ಮಂಗಳವಾರ ಆದೇಶಿಸಿದೆ.

ಕೊರೋನಾವೈರಸ್ ಹರಡುವಿಕೆ ತಪ್ಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೇ 2 ರಂದು ಕರ್ನಾಟಕದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಸೇರಿದಂತೆ ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು  ಆಯೋಗದ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com