
ಅಹಮದಾಬಾದ್: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾ ಬೆನ್
ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
80 ವರ್ಷದ ನರ್ಮದಾಬೆನ್ ಅವರು ಸೋಂಕಿನಿಂದಾಗಿ ಸಿಟಿ ಸಿವಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನ್ಯೂ ರ್ಯಾನಿಪ್ ಪ್ರದೇಶದಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ನನ್ನ ಚಿಕ್ಕಮ್ಮ ಸಿವಿಲ್ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು, ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು ಎಂದು ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
Advertisement