ಮಹಾರಾಷ್ಟ್ರ ಸರ್ಕಾರದಿಂದ 9.17 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 1,500 ರೂ. ಸಹಾಯಧನ

ಕೋವಿಡ್-19 ಸಂಬಂಧಿತ ನಿರ್ಬಂಧಗಳಿಂದ ಸಂಕಷ್ಟ ಎದುರಿಸುತ್ತಿರುವ ಕಟ್ಟಡ ನಿರ್ಮಾಣ ಕ್ಷೇತ್ರದ 9.17 ಲಕ್ಷ  ಕಾರ್ಮಿಕರ ಬ್ಯಾಂಕ್ ಖಾತೆಗೆ ಮಹಾರಾಷ್ಟ್ರ ಸರ್ಕಾರ ತಲಾ 1,500 ರೂಪಾಯಿಗಳನ್ನು ಜಮೆ ಮಾಡಿದೆ. 
ಕಟ್ಟಡ ನಿರ್ಮಾಣ ಕಾರ್ಮಿಕರು (ಸಾಂಕೇತಿಕ ಚಿತ್ರ)
ಕಟ್ಟಡ ನಿರ್ಮಾಣ ಕಾರ್ಮಿಕರು (ಸಾಂಕೇತಿಕ ಚಿತ್ರ)

ಮುಂಬೈ: ಕೋವಿಡ್-19 ಸಂಬಂಧಿತ ನಿರ್ಬಂಧಗಳಿಂದ ಸಂಕಷ್ಟ ಎದುರಿಸುತ್ತಿರುವ ಕಟ್ಟಡ ನಿರ್ಮಾಣ ಕ್ಷೇತ್ರದ 9.17 ಲಕ್ಷ  ಕಾರ್ಮಿಕರ ಬ್ಯಾಂಕ್ ಖಾತೆಗೆ ಮಹಾರಾಷ್ಟ್ರ ಸರ್ಕಾರ ತಲಾ 1,500 ರೂಪಾಯಿಗಳನ್ನು ಜಮೆ ಮಾಡಿದೆ. 

ರಾಜ್ಯ ಕಾರ್ಮಿಕ ಸಚಿವ ಹಸನ್ ಮುಶ್ರಿಫ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. "ರಾಜ್ಯದಲ್ಲಿ 13 ಲಕ್ಷ ನೋಂದಾಯಿತ ಕಾರ್ಮಿಕರಿದ್ದು, ಈ ಪೈಕಿ 9.17 ಲಕ್ಷ ನೌಕರರಿಗೆ ತಲಾ 1,500 ರೂಪಾಯಿಗಳಂತೆ ಒಟ್ಟು 137.61 ಕೋಟಿ ರೂಪಾಯಿಗಳನ್ನು ಬ್ಯಾಂಕ್ ಖಾತೆಗಳಿಗೆ ಕೇವಲ ನಾಲ್ಕು ದಿನಗಳಲ್ಲಿ ಹಾಕಲಾಗಿದೆ" ಎಂದು ಹೇಳಿದ್ದಾರೆ

ನೌಕರರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಹಾರಾಷ್ಟ್ರ ಬಿಲ್ಡಿಂಗ್ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಈ ಕ್ರಮ ಕೈಗೊಂಡಿದೆ. ಕಳೆದ ವರ್ಷ ಲಾಕ್ ಡೌನ್ ಅವಧಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 5,000 ರೂಪಾಯಿಗಳನ್ನು ನೀಡಲಾಗಿತ್ತು. ಕೋವಿಡ್-19 ಸೋಂಕು ತಡೆಗಟ್ಟಲು ಮೇ.1 ವರೆಗೆ ಮಹಾರಾಷ್ಟ್ರದಲ್ಲಿ ನಿರ್ಬಂಧ ವಿಧಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com