ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಡಳಿತ ವೈಖರಿಗೆ ಅಮಿತ್ ಶಾ ಮೆಚ್ಚುಗೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಡಳಿತದ ವೈಖರಿಗೆ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
ಅಮಿತ್ ಶಾ
ಅಮಿತ್ ಶಾ
Updated on: 

ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಡಳಿತದ ವೈಖರಿಗೆ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಲಖನೌ ನಲ್ಲಿ ಉತ್ತರ ಪ್ರದೇಶ ರಾಜ್ಯ ವಿಧಿ ವಿಜ್ಞಾನ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿರುವ ಅಮಿತ್ ಶಾ, ಬಿಜೆಪಿ ಸರ್ಕಾರ ಜಾತಿ ಆಧಾರದಲ್ಲಿ ಕೆಲಸ ಮಾಡುವುದಿಲ್ಲ. ಅತ್ಯಂತ ಬಡವರ ಅಭಿವೃದ್ಧಿಗೆ ಹಾಗೂ ಕಾನೂನು ಸುವ್ಯವಸ್ಥೆಯ ಪುನರುಜ್ಜೀವನಕ್ಕಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಯೋಗಿ ಆದಿತ್ಯನಾಥ್ ಅವರ ಆಡಳಿತ ವೈಖರಿಯ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ಅಮಿತ್ ಶಾ, ಕಾನೂನು ಸುವ್ಯವಸ್ಥೆಯಲ್ಲಿ ರಾಜ್ಯವನ್ನು ಅಗ್ರ ಶ್ರೇಣಿಗೆ ಕೊಂಡೊಯ್ದಿರುವುದನ್ನು ಹಾಡಿ ಹೊಗಳಿದ್ದಾರೆ. 

"ಬಿಜೆಪಿ ಸರ್ಕಾರ ಜಾತಿ, ಕುಟುಂಬದ ಆಧಾರದಲ್ಲಿ ಅಥವಾ ತಮ್ಮ ಆಪ್ತರಿಗಾಗಿ ಕೆಲಸ ಮಾಡುವುದಿಲ್ಲ ಅತ್ಯಂತ ಬಡವರ ಅಭಿವೃದ್ಧಿಗೆ ಹಾಗೂ ಕಾನೂನು ಸುವ್ಯವಸ್ಥೆಯ ಪುನರುಜ್ಜೀವನಕ್ಕಾಗಿ ಕೆಲಸ ಮಾಡಲಿದೆ" ಎಂದಿರುವ ಅಮಿತ್ ಶಾ, 2019 ಕ್ಕಿಂತಲೂ ಆರು ವರ್ಷಗಳ ಕಾಲ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸಂಚರಿಸಿದ್ದೇನೆ. ಆದ್ದರಿಂದ ಈ ಹಿಂದಿನ ಉತ್ತರ ಪ್ರದೇಶದ ಬಗ್ಗೆ ಚೆನ್ನಾಗಿ ಅರಿವಿದೆ. ಯೋಗಿ ಆದಿತ್ಯನಾಥ್ ಹಾಗೂ ಅವರ ತಂಡ ಉತ್ತರ ಪ್ರದೇಶವನ್ನು ಕಾನೂನು ಸುವ್ಯವಸ್ಥೆಯಲ್ಲಿ ಅಗ್ರ ಶ್ರೇಣಿಗೆ ಕೊಂಡೊಯ್ದಿದ್ದಾರೆ ಎಂದು 2021 ರಲ್ಲಿ ಹೆಮ್ಮೆಯಿಂದ ಹೇಳಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com