ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಸೇನಾ ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ.

ಪಠಾಣ್​ಕೋಟ್​​ನಿಂದ ವೆಪನ್ ಸಿಸ್ಟಮ್ ಇಂಟಿಗ್ರೇಟೆಡ್ ಹೆಲಿಕಾಪ್ಟರ್ ಬೆಳಗ್ಗೆ 10:20 ಕ್ಕೆ ಟೇಕಾಫ್​ ಆಗಿದೆ. ರಂಜಿತ್ ಸಾಗರ್ ಡ್ಯಾಂ ಪ್ರದೇಶದಲ್ಲಿ ಹೆಲಿಕಾಪ್ಟರ್ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಮಾಹಿತಿ ನೀಡಿರುವ ಪಠಾಣ್'ಕೋಟ್'ನ ಎಸ್'ಪಿ ಸುರೇಂದ್ರ ಲಂಬಾ ಅವರು, ಸಾಗರ್ ಡ್ಯಾಂ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿರುವ ಕುರಿತು ಮಾಹಿತಿ ಬಂದಿತ್ತು, ಕೂಡಲೇ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಸಾವು-ನೋವು ಸಂಭವಿಸಿರುವ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಹೆಲಿಕಾಪ್ಟರ್ ಪತನಗೊಂಡಿರುವ ಡ್ಯಾಂ ಪಂಜಾಬ್‌ನ ಪಠಾಣ್‌ಕೋಟ್‌ನಿಂದ ಸುಮಾರು 30 ಕಿಮೀ ದೂರದಲ್ಲಿದೆ ಎಂದು ತಿಳಿದುಬಂದಿದೆ.

ಈ ವರ್ಷದ ಆರಂಭದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್​​ ಜಮ್ಮುಕಾಶ್ಮೀರ- ಪಂಜಾಬ್​ ಗಡಿಯಲ್ಲಿ ಪತನಗೊಂಡು ಓರ್ವ ಪೈಲಟ್ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com