ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು.
ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು, ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಿದ್ದು, ಇದೀಗ ಓರ್ವ ಉಗ್ರನನ್ನು ಸದೆಬಡಿದಿದ್ದಾರೆಂದು ತಿಳಿದುಬಂದಿದೆ.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Advertisement