ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ- ರಾಷ್ಟ್ರೀಯ ಕಿಸಾನ್ ಮಂಚ್

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಟನಾನಿರತ ರೈತರು ಆಡಳಿತರೂಢ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮತ ಚಲಾಯಿಸುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಠ ಕಲಿಸಲಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ಮಂಗಳವಾರ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಥುರಾ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಟನಾನಿರತ ರೈತರು ಆಡಳಿತರೂಢ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮತ ಚಲಾಯಿಸುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಠ ಕಲಿಸಲಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ಮಂಗಳವಾರ ಹೇಳಿದೆ.

ಮಥುರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಷ್ಟ್ರೀಯ ಕಿಸಾನ್ ಮಂಚ್ ರಾಷ್ಟ್ರೀಯ ಅಧ್ಯಕ್ಷ ಶೇಕರ್ ದೀಕ್ಷಿತ್, ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿ ಪಕ್ಷದ ವಿರುದ್ಧ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ನಾಳೆ ಕಿಸಾನ್ ಸಂಸದ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಲಿದೆ. ಮುಂದಿನ ಕಾರ್ಯತಂತ್ರದ ಆಧಾರದ ಮೇಲೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ದೀಕ್ಷಿತ್ ಹೇಳಿದರು. ರೈತರ ಮೇಲೆ ಕೃಷಿ ಕಾನೂನನ್ನು ಹೇರುವ ಕೇಂದ್ರದ ಔಚಿತ್ಯವನ್ನು ಅವರು ಪ್ರಶ್ನಿಸಿದರು, ಇದು ವಾಸ್ತವವಾಗಿ "ರೈತ ವಿರೋಧಿ ಮತ್ತು ಬಂಡವಾಳಶಾಹಿ ಪರ ಎಂದರು.

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ "ಕೃಷಿ ಕಾನೂನುಗಳ ಪೋಟೋಕಾಪಿ" ಎಂದು ಬಣ್ಣಿಸಿದ ಅವರು, ಕೈಗಾರಿಕೋದ್ಯಮಿಗಳ ಹಿತಾಸಕ್ತಿಗಳನ್ನು ಉಳಿಸಲು ಈ ಯೋಜನೆಯನ್ನು ನಡೆಸುತ್ತಿರುವುದರಿಂದ ಅದು ಸಂಪೂರ್ಣವಾಗಿ ವಿಫಲವಾಗಿದೆ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಸರ್ಕಾರವು ಹೇಳಿಕೊಂಡಿರುವುದು ಅವರನ್ನು ದಾರಿ ತಪ್ಪಿಸುವ ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು ದೀಕ್ಷಿತ್ ಹೇಳಿದರು.

ಕಬ್ಬು ಬೆಳೆಗಾರರ ​​ಬಾಕಿ ಹಣವನ್ನು ಸಕಾಲದಲ್ಲಿ ಪಾವತಿಸದಿದ್ದರೆ ರಾಷ್ಟ್ರೀಯ ಕಿಸಾನ್ ಮಂಚ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಲಕ್ನೋದಲ್ಲಿ ಯುಪಿ ವಿಧಾನ ಸಭೆಯನ್ನು 'ಘೇರಾವ್' ಹಾಕಲಿದ್ದಾರೆ ಎಂದು ಅವರು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com