ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ, ಕೇಂದ್ರ ಸರ್ಕಾರಕ್ಕೆ ಬಿಎಸ್‌ಪಿ ಬೆಂಬಲ: ಮಾಯಾವತಿ

ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ, ಕೇಂದ್ರ ಸರ್ಕಾರಕ್ಕೆ ಬಿಎಸ್‌ಪಿ ಬೆಂಬಲ ನೀಡಲಿದೆ ಎಂದು ಪಕ್ಷದ ಅಧಿನಾಯಕಿ ಮಾಯಾವತಿ ಹೇಳಿದ್ದಾರೆ.
ಮಾಯಾವತಿ
ಮಾಯಾವತಿ
Updated on: 

ಲಖನೌ: ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ, ಕೇಂದ್ರ ಸರ್ಕಾರಕ್ಕೆ ಬಿಎಸ್‌ಪಿ ಬೆಂಬಲ ನೀಡಲಿದೆ ಎಂದು ಪಕ್ಷದ ಅಧಿನಾಯಕಿ ಮಾಯಾವತಿ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಯಾವತಿ ಅವರು, 'ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜಾತಿಗಣತಿಗೆ ಸಂಬಂಧಿಸಿದಂತೆ ರಚನಾತ್ಮಕ ಕ್ರಮಗಳನ್ನು ಕೈಗೊಂಡರೆ ಬಿಎಸ್‌ಪಿಯು ಸಂಸತ್ತಿನ ಒಳಗೆ ಮತ್ತು ಹೊರಗೆ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ದೇಶದಲ್ಲಿರುವ ಒಬಿಸಿ ಜನಸಂಖ್ಯೆಯ ಜಾತಿಗಣತಿ ನಡೆಸಿದರೆ ಕೇಂದ್ರ ಸರ್ಕಾರಕ್ಕೆ ಬಿಎಸ್‌ಪಿಯು ಖಂಡಿತವಾಗಿಯೂ ಬೆಂಬಲ ನೀಡಲಿದೆ ಎಂದೂ ಅವರು ಹೇಳಿದ್ದಾರೆ.

ಕೇವಲ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಜನಸಂಖ್ಯೆಯ ಜಾತಿಗಣತಿಯನ್ನು ನಡೆಸಲು ಕೇಂದ್ರ ನಿರ್ಧರಿಸಿದೆ. ಈ ಬಗ್ಗೆ ಪ್ರಧಾನಿ ಅವರೊಂದಿಗೆ ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಮಾಯಾವತಿ ಅವರು ಈ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com