ಚಂಡೀಗಡ: ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಚಂಡೀಗಡದ ಕೈ ಮುಖಂಡ ಪರದೀಪ್ ಛಾಬ್ರಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆಂಬ ಆರೋಪದ ಮೇಲೆ ಛಾಬ್ರಾ ಅವರಿಗೆ ನೊಟೀಸ್ ನೀಡಿದ ಬೆನ್ನಲ್ಲೇ ಪರದೀಪ್ ಛಾಬ್ರಾ ತಮ್ಮ ರಾಜಿನಾಮೆ ಪ್ರಕಟಿಸಿದ್ದಾರೆ.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ನೆಟ್ಟಗಿರುವ ಮನುಷ್ಯ ಎಂದು ಕೋಪ ಮತ್ತು ಸುಳ್ಳನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.ಈ ವರ್ಷದ ಫೆಬ್ರವರಿಯಲ್ಲಿ ಸುಭಾಷ್ ಚಾವ್ಲಾ ಅವರನ್ನು ಪಕ್ಷದ ನಗರ ಘಟಕದ ಮುಖ್ಯಸ್ಥರನ್ನಾಗಿ ಮಾಡಲಾಯಿತು.
Advertisement