ಜಾನ್ಸನ್ ಅಂಡ್ ಜಾನ್ಸನ್ ಸಿಂಗಲ್-ಡೋಸ್ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ

ಅಮೆರಿಕ ಮೂಲದ ಖ್ಯಾತ ಔಷದ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್  ಸಂಸ್ಥೆ ತನ್ನ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.
ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ
ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ

ನವದೆಹಲಿ: ಅಮೆರಿಕ ಮೂಲದ ಖ್ಯಾತ ಔಷದ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್  ಸಂಸ್ಥೆ ತನ್ನ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.

 ಈ ಹಿಂದೆ ಕಂಪನಿಯು ತನ್ನ ಸಿಂಗಲ್-ಡೋಸ್ ಕೋವಿಡ್ -19 ಲಸಿಕೆಯನ್ನು ಭಾರತಕ್ಕೆ ತರಲು ಬದ್ಧವಾಗಿದ್ದು, ಭಾರತ ಸರ್ಕಾರದೊಂದಿಗೆ ನಡೆಯುತ್ತಿರುವ ಚರ್ಚೆಗಳನ್ನು ಎದುರು ನೋಡುತ್ತಿದೆ ಎಂದು ಹೇಳಿತ್ತು.

"ಆಗಸ್ಟ್ 5, 2021 ರಂದು ಜಾನ್ಸನ್ ಅಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ ತನ್ನ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯ (ತುರ್ತು ಬಳಕೆಗೆ ಅಧಿಕಾರ) ಇಯುಎಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ" ಎಂದು ಜಾನ್ಸನ್ ಮತ್ತು ಜಾನ್ಸನ್ ಇಂಡಿಯಾ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದು ಒಂದು ಪ್ರಮುಖ ಮೈಲುಗಲ್ಲಾಗಿದ್ದು, ಸಂಸ್ಥೆಯ ಸಿಂಗಲ್ ಡೋಸ್ ಕೋವಿಡ್-19 ಲಸಿಕೆಯನ್ನು ಭಾರತದ ಜನರಿಗೆ ಮತ್ತು ಪ್ರಪಂಚದ ಇತರೆ ಭಾಗಗಳಿಗೆ ಬಯೋಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ತರಲು ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

"ಬಯಾಲಾಜಿಕಲ್ ಇ ಸಂಸ್ಥೆ ನಮ್ಮ ಜಾಗತಿಕ ಪೂರೈಕೆ ಸರಪಳಿ ಜಾಲದ ಒಂದು ಪ್ರಮುಖ ಭಾಗವಾಗಿದೆ. ನಮ್ಮ ಜಾನ್ಸನ್ ಮತ್ತು ಜಾನ್ಸನ್ ಕೋವಿಡ್-19 ಲಸಿಕೆಯನ್ನು ಸರ್ಕಾರಗಳು, ಆರೋಗ್ಯ ಅಧಿಕಾರಿಗಳು ಮತ್ತು ಕೋವಾಕ್ಸ್ ಕಾರ್ಯಕ್ರಮದೊಂದಿಗೆ ನಾವು ಹೊಂದಿರುವ ವ್ಯಾಪಕ ಸಹಯೋಗ ಮತ್ತು ಪಾಲುದಾರಿಕೆಯ ಮೂಲಕ ಪೂರೈಸಲು ಸಹಾಯ ಮಾಡುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಶೇ.85ರಷ್ಟು ಪರಿಣಾಮಕಾರಿತ್ವ
ಇನ್ನು ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯು ಸೋಂಕಿನ ವಿರುದ್ಧ ಶೇ.85 ರಷ್ಟು ಪರಿಣಾಮಕಾರಿ ಎಂದು ಲಸಿಕಾ ಪ್ರಯೋಗಗಳಿಂದ ತಿಳಿದುಬಂದಿದೆ ಎನ್ನಲಾಗಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com