ಮತ್ತೊಂದು ಅವಧಿಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ನಾಮನಿರ್ದೇಶನ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ರೇಖಾ ಶರ್ಮಾ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ  ಮೂರು ವರ್ಷಗಳ ಅವಧಿಗೆ ಮತ್ತೊಮ್ಮೆ ನಾಮನಿರ್ದೇಶನ ಮಾಡಿದೆ.
ರೇಖಾ ಶರ್ಮಾ
ರೇಖಾ ಶರ್ಮಾ

ನವದೆಹಲಿ: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ರೇಖಾ ಶರ್ಮಾ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ  ಮೂರು ವರ್ಷಗಳ ಅವಧಿಗೆ ಮತ್ತೊಮ್ಮೆ ನಾಮನಿರ್ದೇಶನ ಮಾಡಿದೆ.

ರೇಖಾ ಶರ್ಮಾ ನಾಮನಿರ್ದೇಶನವನ್ನು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಪತ್ರಿಕಾ ಪ್ರಕಟಣೆಯಿಂದ ದೃಢಪಡಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಕಾಯ್ದೆ, 1990ರ ಸೆಕ್ಷನ್ 3 ರ ಅನುಸಾರ, ಕೇಂದ್ರ ಸರ್ಕಾರವು ಈ ಮೂಲಕ ಶ್ರೀಮತಿ ರೇಶಾ ಶರ್ಮಾ ಅವರನ್ನು ನಾಮನಿರ್ದೇಶನ ಮಾಡಿದೆ. 

ರೇಖಾ ಶರ್ಮಾ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿ,  ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ. 07.08.2021 ರಿಂದ ಜಾರಿಗೆ ಬರುವಂತೆ 65 ವರ್ಷ ವಯಸ್ಸಿನವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಂದುವರಿಯಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com