ಬುದ್ಗಾಮ್ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಮತ್ತೋರ್ವನ ಬಂಧನ

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಬುದ್ಗಾಂನ ಮಚುವಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. 

ಸ್ಥಳದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರ ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ ಅಧಿಕಾರಿಗಳು ಸ್ಥಳವನ್ನು ಸುತ್ತುವರೆದು ಉಗ್ರನನ್ನು ಹೊಡೆದುರುಳಿಸಿವೆ ಎಂದು ತಿಳಿದುಬಂದಿದೆ. 

ಕಾರ್ಯಾಚರಣೆ ವೇಳೆ ಮತ್ತೋರ್ವ ಉಗ್ರನನ್ನು ಭದ್ರತಾ ಪಡೆಗಳು ಬಂಧನಕ್ಕೊಳಪಡಿಸಿದ್ದು, ಆತನ ಬಳಿಯಿದ್ದ 1 ಎಕೆ-47 ರೈಫಲ್ ಹಾಗೂ ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com