ಜೈಪುರ: ರಾಜಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಜಸ್ಥಾನದ ನಗೌರ್ ನ ಕುಚಮಮ್ ಸಿಟಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರ ಪೈಕಿ 5ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಇತರೆ ಮೂವರನ್ನು ಆ್ಯಂಬುಲೆನ್ಸ್ ನಲ್ಲಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂತಾಪ ಸೂಚಿಸಿದ ಸಿಎಂ ಗೆಹ್ಲೋಟ್
ಇದೇ ವೇಳೆ ಅಪಘಾತಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 'ನಾಗೌರ್ ನ ಕುಚಮಾನ್ ಸಿಟಿ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 5 ಜನರ ಸಾವು ಅತ್ಯಂತ ದುಃಖಕರವಾಗಿದೆ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿಕೊಳ್ಳುತೇನೆ.
Advertisement