ಪಂಜಾಬ್: ಶಾಲಾ ಬಸ್ ಗೆ ಕಾರು ಡಿಕ್ಕಿ, ದಂಪತಿ ಸಾವು, 10 ಮಕ್ಕಳಿಗೆ ಗಾಯ

ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಜಮ್ಮು ಮೂಲದ ದಂಪತಿ ಸಾವನ್ನಪ್ಪಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಅಮೃತಸರ: ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಜಮ್ಮು ಮೂಲದ ದಂಪತಿ ಸಾವನ್ನಪ್ಪಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಖಾಸಗಿ ಶಾಲೆಯ ಬಸ್ ಸೋಹಿಯಾ ಗ್ರಾಮದ ಬಳಿ ಹೆದ್ದಾರಿಗೆ ಬಂದು ಸೇರಿಕೊಳ್ಳುತ್ತಿತ್ತು. ಆದರೆ ಬಸ್ ಚಾಲಕ ಕಾರು ಹಿಂದಿನಿಂದ ಬರುತ್ತಿರುವುದನ್ನು ಗಮನಿಸದ ಹಿನ್ನೆಲೆಯಲ್ಲಿ ಕಾರು ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ಕಾರು ಬಸ್ಸಿಗೆ ಡಿಕ್ಕಿ ಹೊಡೆದಾಗ, ಅದರ ಹಿಂದೆ ಬರುತ್ತಿದ್ದ ಮರಳು ತುಂಬಿದ ಟ್ರಕ್ ಚಾಲಕ ಬಲವಾಗಿ ಬ್ರೇಕ್ ಹಾಕಿದ್ದಾರೆ. ಆದರೆ ವಾಹನ ಸ್ಕಿಡ್ ಆಗಿ ಉರುಳಿಬಿದ್ದು ಟ್ರಕ್ ಚಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಸ್ ಚಾಲಕ ಸಹ ಗಾಯಗೊಂಡಿದ್ದು, ಮಕ್ಕಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮಕ್ಕಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಅಪಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com