ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಶೋಫಿಯಾನ್ ಜಿಲ್ಲೆಯ ಜೈನಾಪೋರಾದ ಕ್ರಾಲ್ಚೆಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಮಂದಿ ಉಗ್ರರು ಏಕಾಎಕಿ ದಾಳಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಭಯೋತ್ಪಾದಕರು ಸಿಆರ್‌ಪಿಎಫ್ ತಂಡದ ಮೇಲೆ ಗುಂಡು ಹಾರಿಸಿದರು. ಇದರಿಂದ ಓರ್ವ ಯೋಧ ಗಾಯಗೊಂಡರು. ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಿಟಿ ಅಜಯ್ ಕುಮಾರ್ ಕೈಗೆ ಗುಂಡು ತಾಗಿ ಗಾಯವಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರು ಗುಂಡು ಹಾರಿಸಿದ ಕೂಡಲೇ ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿತು. ಈ ವೇಳೆ ಒಂದು ಮ್ಯಾಗಜಿನ್ ನ್ನು ವಶಕ್ಕೆ ಪಡೆಯಲಾಯಿತು. ಇದೀಗ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com