ರಾಜೌರಿಯಲ್ಲಿ ಬಿಜೆಪಿ ನಾಯಕನ ಮನೆಯ ಮೇಲೆ ಗ್ರೆನೇಡ್ ದಾಳಿ; ನಾಯಕ ಸೇರಿದಂತೆ ಐವರಿಗೆ ಗಾಯ!

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮತ್ತು ಆತನ ಪತ್ನಿಯನ್ನು ಹತ್ಯೆಗೈದ ಮೂರು ದಿನಗಳ ನಂತರ, ಉಗ್ರರು ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಾಜೌರಿಯಲ್ಲಿರುವ ಬಿಜೆಪಿ ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ನಾಯಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮತ್ತು ಆತನ ಪತ್ನಿಯನ್ನು ಹತ್ಯೆಗೈದ ಮೂರು ದಿನಗಳ ನಂತರ, ಉಗ್ರರು ಗುರುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಾಜೌರಿಯಲ್ಲಿರುವ ಬಿಜೆಪಿ ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದು, ಬಿಜೆಪಿ ನಾಯಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಶಂಕಿತ ಉಗ್ರರು ಸಂಜೆ ರಾಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿರುವ ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸದ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಬಿಜೆಪಿ ನಾಯಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ ಪೊಲೀಸ್ ಮೂಲಗಳ ತಿಳಿಸಿವೆ.

ಗಾಯಗೊಂಡಿರುವ ಎಲ್ಲಾ ಐವರು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದರು. 

ಗ್ರೆನೇಡ್ ದಾಳಿ ನಡೆದ ತಕ್ಷಣ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ದಾಳಿಕೋರರನ್ನು ಪತ್ತೆ ಮಾಡಲು ಭದ್ರತಾ ಸಿಬ್ಬಂದಿ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮೂರು ದಿನಗಳೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com