ಕೋಲ್ಕತ್ತಾ: ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.
ಈ ಅರ್ಜಿಯ ವಿಚಾರಣೆಯನ್ನು ಬಂಗಾಳದಿಂದ ಹೊರಗೆ ವರ್ಗಾಯಿಸುವಂತೆ ಕೋರಿ ಸುವೇಂದು ಅಧಿಕಾರಿ ಸಲ್ಲಿಸಿದ್ದ ಅರ್ಜಿ ಸುುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಹಿನ್ನಲೆಯಲ್ಲಿ ಮಮತಾ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ಕೊಲ್ಕತ್ತಾ ಹೈಕೋರ್ಟ್ ನವೆಂಬರ್ 15ಕ್ಕೆ ಮುಂದೂಡಿದೆ.
ಸುವೇಂದು ಅಧಿಕಾರಿಯ ಪರವಾಗಿ ಹಾಜರಾದ ವಕೀಲ ಜಯದೀಪ್ ಕರ್, ಅರ್ಜಿಯನ್ನು ಮುಂದೂಡಬೇಕು ಎಂದು ನ್ಯಾಯಮೂರ್ತಿಗಳಲ್ಲಿ ವಿನಂತಿಸಿಕೊಂಡರು.
ಈ ಹಿಂದೆ, ನ್ಯಾಯಮೂರ್ತಿ ಕೌಶಿಕ್ ಚಂದಾ ಅವರು ಚುನಾವಣಾ ಅರ್ಜಿಯ ವಿಚಾರಣೆಯನ್ನು ಕೈಬಿಟ್ಟ ನಂತರ ಮಮತಾ ಮೇಲೆ 5 ಲಕ್ಷ ರೂ. ವೆಚ್ಚವನ್ನು ವಿಧಿಸಿದ್ದರು.
Advertisement