
ಚೆನ್ನೈ: ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅರ್ಪಿಸಿದೆ.
ಇಂದು ರಾಜ್ಯ ವಿಧಾನಸಭೆಯಲ್ಲಿ ಕೃಷಿಗಾಗಿ ಮೊದಲ ವಿಶೇಷ ಬಜೆಟ್ ಮಂಡಿಸಿದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಎಮ್‌ಆರ್‌ಕೆ ಪನ್ನೀರಸೆಲ್ವಂ ಅವರು, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಈ ಕೃಷಿ ಬಜೆಟ್ ಅನ್ನು ಅರ್ಪಿಸಲಾಗಿದೆ ಎಂದು ಹೇಳಿದರು.
ಕೃಷಿ ಬಜೆಟ್ ನ ಪ್ರಮುಖ ಅಂಶಗಳು
ಕೃಷಿ ಕ್ಷೇತ್ರದ ಬೆಳವಣಿಗೆಗೆ 16 ಅಂಶಗಳ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು, ಇದರಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ರಾಗಿ, ಹಣ್ಣುಗಳು ಮತ್ತು ಇತರ ಕೃಷಿ ಉತ್ಪನ್ನಗಳಿಗೆ ಸಮಂಜಸವಾದ ಬೆಲೆಯನ್ನು ಖಾತರಿಪಡಿಸುವುದು.
ಯುವಕರನ್ನು ಕೃಷಿ ಉದ್ಯಮಿಗಳಾಗಿ ಪ್ರೋತ್ಸಾಹಿಸುವುದು.
ಸಾವಯವ ಕೃಷಿಗಾಗಿ ಹೊಸ ಯೋಜನೆಯನ್ನು ಘೋಷಿಸಲಾಗಿದೆ; ಸಾವಯವ ಕೃಷಿಗಾಗಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗುವುದು.
ತಮಿಳುನಾಡಿನಲ್ಲಿ ಸಾವಯವ ಕೃಷಿಯಲ್ಲಿ ತೊಡಗಿರುವ ರೈತರಿಗೆ ಇನ್ಪುಟ್ ಸಬ್ಸಿಡಿಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವರು ಘೋಷಿಸಿದ್ದಾರೆ.
Advertisement