ದೆಹಲಿ ದ್ವಾರಕಾ ಹೋಟೆಲ್ ನಲ್ಲಿ ಅಗ್ನಿ ಅವಘಡ: ಇಬ್ಬರ ಸಜೀವ ದಹನ

ನೈರುತ್ಯ ದೆಹಲಿಯ ದ್ವಾರಕಾದ ಹೋಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ದ್ವಾರಕಾ ಹೋಟೆಲ್
ದ್ವಾರಕಾ ಹೋಟೆಲ್
Updated on: 

ನವದೆಹಲಿ: ನೈರುತ್ಯ ದೆಹಲಿಯ ದ್ವಾರಕಾದ ಹೋಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆಂದು  ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ನಾಲ್ಕು ಅಂತಸ್ತಿನ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಕುರಿತು ಇಂದು ಬೆಳಿಗ್ಗೆ 7.40ರ ಸುಮಾರಿಗೆ ಮಾಹಿತಿ ಬಂದಿತ್ತು. ಕೂಡಲೇ 8 ಅಗ್ನಿಶಾಮಕ ದಳದ ವಾಹನ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದೌಡಾಯಿಸಲಾಯಿತು. ಬಳಿಕ ಕಾರ್ಯಾಚರಣೆ ನಡೆಸಿ ಎರಡು ಮೃತದೇಹಗಳನ್ನು ಹೊರಗೆ ತರಲಾಯಿತು ಎಂದು ಹೇಳಿದ್ದಾರೆ. 

ಹೋಟೆಲ್ ದ್ವಾರಕಾ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com