ಸುಪ್ರೀಂ ಕೋರ್ಟ್ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಮಹಿಳೆ

ಸುಪ್ರೀಂ ಕೋರ್ಟ್‌ನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on: 

ನವದೆಹಲಿ: ಸುಪ್ರೀಂ ಕೋರ್ಟ್‌ನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರೂ ಆತ್ಮಹತ್ಯೆ ನಿರ್ಧಾರದ ಹಿಂದಿನ ಕಾರಣ ತಕ್ಷಣವೇ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಪುರುಷ ಮತ್ತು ಮಹಿಳೆ ಬೆಂಕಿ ಹಚ್ಚಿಕೊಳ್ಳುವ ಮುನ್ನ ತಮ್ಮ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ ಪೊಲೀಸ್ ಆಯುಕ್ತ(ನವದೆಹಲಿ)ದೀಪಕ್ ಯಾದವ್ ಹಾಗೂ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ತಂಡ, ಪುರುಷ ಮತ್ತು ಮಹಿಳೆಯನ್ನು ರಕ್ಷಿಸಿದೆ.

 ಪೊಲೀಸ್ ತಂಡ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು ಮತ್ತು ತಕ್ಷಣವೇ ಸಂತ್ರಸ್ತರನ್ನು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮತ್ತು ಮಹಿಳೆಯ ವಿಚಾರಣೆ ನಡೆಯುತ್ತಿದೆ ಮತ್ತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com