ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಗೌರವ ಸಲ್ಲಿಸಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ಗೌರವ ಸಲ್ಲಿಸುತ್ತಿರುವ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್
ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ಗೌರವ ಸಲ್ಲಿಸುತ್ತಿರುವ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್
Updated on

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 3ನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಗೌರವ ಸಲ್ಲಿಸಿದರು.

ಇಂದು ಮುಂಜಾನೆ ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.

ಇವರೊಂದಿಗೆ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್)  ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಅವರ ವ್ಯಕ್ತಿತ್ವ, ಪ್ರೀತಿಯ ಸ್ವಭಾವ, ಬುದ್ಧಿ ಹಾಗೂ ಹಾಸ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ರಾಷ್ಟ್ರದ ಪ್ರಗತಿಗೆ ಅವರ ಕೊಡುಗೆಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಅಟಲ್ ಜೀ ಅವರು ನಮ್ಮ ಜನರ ಹೃದಯ ಮತ್ತು ಮನಸ್ಸಿನಲ್ಲಿ ಸದಾ ವಾಸಿಸುತ್ತಿದ್ದಾರೆ. ಇಂದು, ಅವರ ಪುಣ್ಯ ತಿಥಿಯಾಗಿದ್ದು, ಸದೈವ ಅಟಲ್‌ಗೆ ಹೋಗಿ ಗೌರವ ಸಲ್ಲಿಸಲಾಯಿತು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com